Jeremiah 6:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತಐ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಘಂದಿತು. ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತಐ ಕೇವಲ ವ್ಯರ್ಥವಾಯಿತು. ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.
Kannada BSI Bible 2016
ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ತಿದಿಯು ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ, ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವದಿಲ್ಲ.
Kannada Bible (KNCL) BSI 2016
ತಿದಿ ಬುಸುಬುಸುಗುಟ್ಟುತ್ತದೆ. ಸೀಸ ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಶ್ರಮವೆಲ್ಲ ವ್ಯರ್ಥ. ಏಕೆಂದರೆ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಲುಮೆಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಪರಿಶ್ರಮವೆಲ್ಲ ವ್ಯರ್ಥ, ಕೆಟ್ಟವರಿಂದ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.