Jeremiah 6:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕುರುಬರು ಜೆರುಸಲೇಮಿಗೆ ಬರುತ್ತಾರೆ. ಮತ್ತು ಕುರಿಮಂದೆಗಳನ್ನು ತರುತ್ತಾರೆ. ಅದರ ಸುತ್ತಲೂ ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಾರೆ. ಪ್ರತಿಯೊಬ್ಬ ಕುರುಘನು ತನ್ನ ಕುರಿಹಿಂಡನ್ನು ನೋಡಿಕೊಳ್ಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು.
Kannada BSI Bible 2016
ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅವರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು.
Kannada Bible (KNCL) BSI 2016
ವೈರಿಗಳಾದ ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರ ಎದುರಿಗೆ ಹಾಗೂ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು. ಪ್ರತಿಯೊಬ್ಬನೂ ತನಗೆ ಇಷ್ಟಬಂದ ಸ್ಥಳದಲ್ಲೇ ಮೇಯಿಸಿಬಿಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುರುಬರು ತಮ್ಮ ಮಂದೆಗಳ ಸಂಗಡ ಅವಳ ವಿರುದ್ಧ ಬರುವರು. ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು. ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.”