Jeremiah 6:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾವಿಯಲ್ಲಿ ಹೊಸ ನೀರು ಬರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಘಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.
Kannada BSI Bible 2016
ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ; ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಬರುತ್ತದೆ; ರೋಗಗಳೂ ವ್ರಣಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.
Kannada Bible (KNCL) BSI 2016
ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬುಗ್ಗೆಯು ನೀರನ್ನು ಹರಿಯ ಮಾಡುವಂತೆ, ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ. ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳ ಬರುತ್ತದೆ. ದುಃಖವೂ ಗಾಯಗಳೂ ಯಾವಾಗಲೂ ನನ್ನ ಮುಂದೆ ಇವೆ.