Jeremiah 7:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಈ ಪಾಪಗಳನ್ನು ಮಾಡುತ್ತಿದ್ದರೂ ನನ್ನ ಹೆಸರಿನಿಂದ ಕರೆಯಲ್ಪಡುವ ಈ ಆಲಯದಲ್ಲಿ ನನ್ನ ಎದುರಿಗೆ ನಿಲ್ಲಘಹುದೆಂದು ಭಾವಿಸಿರುವಿರಾ? ನೀವು ನನ್ನ ಸಮ್ಮುಖದಲ್ಲಿ ನಿಂತುಕೊಂಡು, “ನಾವು ಸುರಕ್ಷಿತರಾಗಿದ್ದೇವೆ” ಎಂದು ಹೇಳಿಕೊಂಡು ನಿಮ್ಮ ದುಷ್ಕೃತ್ಯಗಳನ್ನು ಮುಂದುವರಿಸಘಹುದೆಂದು ಭಾವಿಸಿರುವಿರಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?
Kannada BSI Bible 2016
ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ನಮಗೆ ಪರಿಹಾರವಾಯಿತು ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡಿಸುವದಕ್ಕೆ ಅವಕಾಶ ಮಾಡಿಕೊಳ್ಳುವಿರೋ?
Kannada Bible (KNCL) BSI 2016
ನನ್ನ ಹೆಸರು ಪಡೆದಿರುವ ಈ ದೇವಾಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ‘ನಾವು ಸುರಕ್ಷಿತರು’ ಎನ್ನುತ್ತೀರಿ. ಈ ಎಲ್ಲ ಅಸಹ್ಯಕಾರ್ಯಗಳನ್ನು ನಡೆಸುವುದಕ್ಕೋ ಈ ಸುರಕ್ಷತೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಬಂದು ನನ್ನ ಹೆಸರನ್ನು ಹೊಂದಿರುವ ಈ ಆಲಯದಲ್ಲಿ ನನ್ನ ಮುಂದೆ ನಿಂತುಕೊಂಡು, “ನಾವು ಸುರಕ್ಷಿತರು” ಎಂದು ಹೇಳಿ ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲಾಗಿದ್ದೇವೆಂದು ಹೇಳುವಿರೋ?