Jeremiah 7:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನೆಐಲ್ಲ ನೋಡುತ್ತಿದ್ದೇನೆ”‘ ಎಂಬುದು ಯೆಹೋವನಾದ ನನ್ನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ.
Kannada BSI Bible 2016
ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ ಎಂಬದು ಯೆಹೋವನಾದ ನನ್ನ ನುಡಿ.
Kannada Bible (KNCL) BSI 2016
ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹೆಸರನ್ನು ಹೊಂದಿರುವ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.