Jeremiah 7:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿದ ದೂರ ಎಸೆದುಬಿಡುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ತೊಲಗಿಸಿಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ತೊಲಗಿಸುವೆನು.
Kannada BSI Bible 2016
ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ಎಸೆದುಬಿಡುವೆನು.
Kannada Bible (KNCL) BSI 2016
ನಿಮ್ಮ ಬಂಧುಬಳಗದವರನ್ನು ಅಂದರೆ, ಇಡಿ ಎಫ್ರಯಿಮ್ ವಂಶದವರನ್ನು ತೊಲಗಿಸಿಬಿಟ್ಟಂತೆ, ನಿಮ್ಮನ್ನೂ ನನ್ನ ಸನ್ನಿಧಿಯಿಂದ ತೊಲಗಿಸುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’