Jeremiah 7:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌದೆಯನ್ನು ಆರಿಸುತ್ತಾರೆ. ತಂದೆಗಳು ಆ ಸೌಧೆಯಿಂದ ಬೆಂಕಿಯನ್ನು ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದಿ ಸ್ವರ್ಗದ ರಾಣಿಗಾಗಿ ಹೋಳಿಗೆಗಳನ್ನು ಮಾಡುತ್ತಾರೆ. ಈ ಯೆಹೂದದ ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ. ಅವರು ನನ್ನನ್ನು ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.
Kannada BSI Bible 2016
ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.
Kannada Bible (KNCL) BSI 2016
‘ಗಗನದೊಡತಿ’ ಎಂದು ಇವರು ಕರೆದ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಗಗನದ ಒಡತಿ,’ ಎಂದು ಇವರು ಕರೆಯುವ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯ ದೇವತೆಗಳಿಗೆ ಪಾನ ನೈವೇದ್ಯವನ್ನು ಅರ್ಪಿಸುತ್ತಾರೆ.”