Jeremiah 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆರೆಮೀಯನೇ, ಯೆಹೋವನ ಆಲಯದ ಹೆಬ್ಬಾಗಿಲಿನ ಹತ್ತಿರ ನಿಂತುಕೊಂಡು ಈ ಸಂದೇಶವನ್ನು ಸಾರು: ‘“ಇದು ಯೆಹೋವನ ಸಂದೇಶ. ಯೆಹೂದದ ಜನರೆಲ್ಲರೇ, ಯೆಹೋವನನ್ನು ಆರಾಊಸಲು ಈ ದ್ವಾರದಿಂದ ಪ್ರವೇಶ ಮಾಡುವ ಜನರೇ, ಈ ಸಂದೇಶವನ್ನು ಕೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.
Kannada BSI Bible 2016
ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು - ಯೆಹೋವನಿಗೆ ಅಡ್ಡಬೀಳುವದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.
Kannada Bible (KNCL) BSI 2016
“ನೀನು ನನ್ನ ಆಲಯದ ಬಾಗಿಲಲ್ಲಿ ನಿಂತು ಈ ವಾಕ್ಯವನ್ನು ಸಾರು - ‘ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳಲು ಈ ದ್ವಾರಗಳನ್ನು ಪ್ರವೇಶಿಸುವ ಎಲ್ಲ ಯೆಹೂದ್ಯರೇ, ಸರ್ವೇಶ್ವರನ ನುಡಿಯನ್ನು ಕೇಳಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರ ಆಲಯದ ಬಾಗಿಲಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು: “ ‘ಯೆಹೂದ್ಯರೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.