Jeremiah 7:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಘಂದಷ್ಟು ಸರ್ವಾಂಗಹೋಮಗಳನ್ನು ಮತ್ತು ಯಜ್ಞಗಳನ್ನು ಅರ್ಪಿಸಿರಿ. ಆ ಯಜ್ಞಗಳ ಮಾಂಸವನ್ನು ನೀವೇ ತಿನ್ನಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.
Kannada BSI Bible 2016
ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು [ಸಾಧಾರಣ] ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.
Kannada Bible (KNCL) BSI 2016
ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ ಇದು: “ನೀವು ಅರ್ಪಿಸುವ ದಹನಬಲಿಗಳನ್ನು, ಸಾಧಾರಣ ಯಜ್ಞಬಲಿಗಳೆಂದು ಭಾವಿಸಿ ಅವುಗಳ ಮಾಂಸವನ್ನು ಕೂಡ ನೀವೇ ತಿನ್ನಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇಸ್ರಾಯೇಲಿನ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ, ಮಾಂಸವನ್ನು ತಿನ್ನಿರಿ.