Jeremiah 7:23 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನೆಐಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ.
Kannada Bible (KNCL) BSI 2016
ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.