Jeremiah 7:24 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಘಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದರಿಯಲಿಲ್ಲ.
Kannada Bible (KNCL) BSI 2016
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.