Jeremiah 7:29 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ ಎಸೆದುಬಿಡು. ಬೋಳುಶಿಖರಕ್ಕೆ ಹೋಗಿ ರೋಊಸು. ಏಕೆಂದರೆ ಯೆಹೋವನು ಈ ತಲೆಮಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆರೂಸಲೇಮೇ,] ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಟುಬಿಟ್ಟು ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.
Kannada Bible (KNCL) BSI 2016
“ಎಲೈ ಜೆರುಸಲೇಮೇ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.