Jeremiah 7:31 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ಜನರು ಬೆನ್‌ಹಿನೊಐಮ್ ತಗ್ಗಿನಲ್ಲಿ ತೋಫೆತೆಂಘ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಙೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಘಂದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿಕೊಡುವದಕ್ಕೆ ಬೆನ್‍ಹಿನ್ನೋಮ್ ತಗ್ಗಿನಲ್ಲಿನ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ; ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
Kannada Bible (KNCL) BSI 2016
ತಮ್ಮ ಗಂಡುಹೆಣ್ಣು ಮಕ್ಕಳನ್ನೂ ಆಹುತಿಕೊಡುವುದಕ್ಕೆ ಬೆನ್‍ಹಿನ್ನೋಮ್ ಕಣಿವೆಯಲ್ಲಿನ ತೋಫೆತೆಂಬ ಬಲಿಪೀಠವನ್ನು ಕಟ್ಟಿದ್ದಾರೆ. ಇಂಥ ಕಾರ್ಯವನ್ನು ನಾನು ವಿಧಿಸಿಲ್ಲ. ಅದು ನನ್ನ ಮನಸ್ಸಿಗೂ ಸುಳಿದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ ಹಿನ್ನೋಮ್ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಪುತ್ರಪುತ್ರಿಯರನ್ನು ಬೆಂಕಿಯಲ್ಲಿ ಸುಡುವುದಕ್ಕೆ ಕಟ್ಟಿದ್ದಾರೆ. ಇದನ್ನು ನಾನು ಆಜ್ಞಾಪಿಸಲಿಲ್ಲ. ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.