Jeremiah 7:32 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿರಲು ನಾನು ಈ ಕಣಿವೆಯನ್ನು ತೋಫೆತ್ ಮತ್ತು ಬೆನ್‌ಹಿನೊಐಮೀನ ಕಣಿವೆ ಎಂದು ಕರೆಯದೆ ಇದನ್ನು ಸಂಹಾರದ ಕಣಿವೆ ಎಂದು ಕರೆಯುವ ದಿನಗಳು ಬರುತ್ತಿವೆ ಎಂಬ ಎಚ್ಚರಿಕೆಯನ್ನು ಕೊಡುತ್ತೇನೆ.” ಇದು ಯೆಹೋವನು ಹೇಳಿದ ಮಾತು. “ಶವಗಳನ್ನು ಹೂಳುವದಕ್ಕೆ ಕೊಂಚವೂ ಸ್ಥಳ ಇಲ್ಲದಂತಾಗುವವರೆಗೆ ತೋಫೆತಿನಲ್ಲಿ ಶವಗಳನ್ನು ಹೂಳುವ ಕಾರಣ ಅದಕ್ಕೆ ಈ ಹೆಸರನ್ನು ಕೊಡಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ‘ಸಂಹಾರದ ತಗ್ಗು’ ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋವಿುನ ತಗ್ಗು ಎಂಬ ಹೆಸರುಗಳು ಹೋಗಿ ಸಂಹಾರದ ತಗ್ಗು ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
Kannada Bible (KNCL) BSI 2016
ಆದ್ದರಿಂದ ಇಗೋ, ಆ ಕಣಿವೆಗೆ ತೋಫೆತ್ ಮತ್ತು ಬೆನ್‍ಹಿನ್ನೋಮ್ ಎಂಬ ಹೆಸರುಗಳು ಹೋಗಿ ಸಂಹಾರದ ಕಣಿವೆ ಎಂದು ಕರೆಯಲಾಗುವ ದಿನಗಳು ಬರಲಿವೆ. ಇನ್ನೆಲ್ಲೂ ಸ್ಥಳವಿಲ್ಲವಾಗಿ ಶವಗಳನ್ನು ಆ ತೋಫೆತಿನಲ್ಲಿ ಹೂಣುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ದಿನಗಳು ಬರಲಿವೆ, ಆ ಕಣಿವೆಗೆ ತೋಫೆತ್ ಮತ್ತು ಬೆನ್ ಹಿನ್ನೋಮ್ ಎಂಬ ಹೆಸರುಗಳು ಹೋಗಿ, ಸಂಹಾರದ ಕಣಿವೆ ಎಂದು ಕರೆಯಲಾಗುವುದು. ಏಕೆಂದರೆ, ಸ್ಥಳವಿಲ್ಲದವರೆಗೂ ತೋಫೆತಿನಲ್ಲಿ ಅವರು ಹೂಳಿಡುವರು.