Jeremiah 7:34 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವದು. ಇದು ಯೆಹೋವನ ನುಡಿ.
Kannada Bible (KNCL) BSI 2016
ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.