Jeremiah 7:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಪರಿಚಿತರೊಂದಿಗೂ ನೀವು ನ್ಯಾಯಘದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,
Kannada BSI Bible 2016
ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರದೇಶಿಯನ್ನಾಗಲಿ ಅನಾಥನನ್ನಾಗಲಿ ವಿಧವೆಯನ್ನಾಗಲಿ ಹಿಂಸಿಸದೆ ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ ನಿಮಗೆ ಹಾನಿಕರವಾದ ಅನ್ಯದೇವತಾಭಕ್ತಿಯನ್ನು ಮಾಡದೆ ಇದ್ದರೆ
Kannada Bible (KNCL) BSI 2016
ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ;