Jeremiah 8:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಊಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.” ಯೆಹೋವನ ನುಡಿಗಳಿವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.
Kannada BSI Bible 2016
ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
Kannada BSI JV (ಕನ್ನಡ ಸತ್ಯವೇದವು J.V. (BSI))
ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.