Jeremiah 8:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ಅವರ ಹಣ್ಣುಗಳನ್ನೂ ಬೆಳೆಗಳನ್ನೂ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. “ದ್ರಾಕ್ಷಿಘಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನ್ನು ಕಿತ್ತುಕೊಳ್ಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.
Kannada BSI Bible 2016
ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇವರನ್ನು ನಿರ್ಮೂಲಮಾಡಿ ಕೊಚ್ಚಿಬಿಡುವೆನು; ದ್ರಾಕ್ಷೆಯ ಬಳ್ಳಿಯಲ್ಲಿಯೂ ಅಂಜೂರದ ಮರದಲ್ಲಿಯೂ ಹಣ್ಣಿರುವದಿಲ್ಲ, ಎಲೆಯು ಬಾಡುವದು; ನಾನು ಹಾಳು ಮಾಡುವವರನ್ನು ಅವರಿಗೆ ನೇವಿುಸುವೆನು. ಇದು ಯೆಹೋವನ ನುಡಿ.
Kannada Bible (KNCL) BSI 2016
“ನಾನು ಕೊಯ್ಲಿಗೆ ಕೈಹಾಕಲು ನೋಡಿದೆ. ಆದರೆ ದ್ರಾಕ್ಷೆಯ ಬಳ್ಳಿಗಳಲ್ಲಿ ಹಣ್ಣಿಲ್ಲ, ಅಂಜೂರದ ಮರದಲ್ಲಿ ಫಲವಿಲ್ಲ. ಎಲೆಯೂ ಬಾಡಿಹೋಗಿದೆ. ಪರರ ತುಳಿತಕ್ಕೆ ಈಡಾಗಿ ಇರುವುದು ಕಾಣುತ್ತದೆ. ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, ಎಂದು ಯೆಹೋವ ದೇವರು ಹೇಳುತ್ತಾರೆ. ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’ ”