Jeremiah 8:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.
Kannada BSI Bible 2016
ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್‌ ದೇವತೆ ಗಳ ಹಿಂದೆಯೂ ನಡೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.
Kannada Bible (KNCL) BSI 2016
ಜನರು: “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.