Jeremiah 8:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಘಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಘಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಘಂದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.
Kannada BSI Bible 2016
ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ವೈರಿಯ ಕುದುರೆಗಳ ಬುಸುಗಾಟವು ದಾನಿನಿಂದ ಕೇಳಬರುತ್ತದೆ; ತುರಂಗಗಳ ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ; ಶತ್ರುಗಳು ಬಂದರು, ಸೀಮೆಯನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು.
Kannada Bible (KNCL) BSI 2016
ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು. ಅವನ ಬಲವಾದವುಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. ಏಕೆಂದರೆ, ಅವರು ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ.