Jeremiah 8:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದದ ಜನರೇ, ನಿಮ್ಮನ್ನು ಕಚ್ಚುವದಕ್ಕಾಗಿ ವಿಷಪೂರಿತ ಹಾವುಗಳನ್ನು ಕಳಿಸುತ್ತಿದ್ದೇನೆ. ಆ ಹಾವುಗಳನ್ನು ತಡೆಯಲಾಗದು. ಅವುಗಳು ನಿಮ್ಮನ್ನು ಕಚ್ಚುವವು.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ.
Kannada BSI Bible 2016
ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು - ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು ಎಂದು ನುಡಿದಿದ್ದಾನೆ.
Kannada Bible (KNCL) BSI 2016
ಸರ್ವೇಶ್ವರ: “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು ಬಿಡುವೆನು. ಅವು ಮಾಯಮಂತ್ರಕ್ಕೆ ಬಾಗದ ನಾಗಸರ್ಪಗಳು! ಅವು ನಿಮ್ಮನ್ನು ಕಚ್ಚದೆ ಬಿಡವು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನಿಮ್ಮಲ್ಲಿ ವಿಷಸರ್ಪಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನೂ ಕಳುಹಿಸುತ್ತೇನೆ. ಅವು ನಿಮ್ಮನ್ನು ಕಚ್ಚುವವು,” ಎಂದು ಯೆಹೋವ ದೇವರು ಹೇಳುತ್ತಾರೆ.