Jeremiah 8:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.
Kannada BSI Bible 2016
ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ನನ್ನ ಪ್ರಜೆಯೆಂಬಾಕೆಯು - ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. [ಅದಕ್ಕೆ ಯೆಹೋವನು - ] ಇವರು ತಮ್ಮ ವಿಗ್ರಹಗಳಿಂದಲೂ ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ [ಅನ್ನುತ್ತಾನೆ].
Kannada Bible (KNCL) BSI 2016
ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ: “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ: “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?