Jeremiah 8:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.
Kannada BSI Bible 2016
ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಆಶ್ರಯಿಸಿ ಪೂಜಿಸಿದ ಸೂರ್ಯಚಂದ್ರತಾರಾಗಣಗಳ ಎದುರಿಗೆ ಹರಡಿಬಿಡುವರು; ಅವುಗಳನ್ನು ಯಾರೂ ಕೂಡಿಸಿ ಹೂಣಿಡುವದಿಲ್ಲ; ಅವು ಭೂವಿುಯ ಮೇಲೆ ಗೊಬ್ಬರವಾಗುವವು.
Kannada Bible (KNCL) BSI 2016
ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ, ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.