Jeremiah 8:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.
Kannada BSI Bible 2016
ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಯಾವಾವ ಸ್ಥಳಗಳಿಗೆ ಈ ದುರ್ವಂಶದವರನ್ನು ಅಟ್ಟಿಬಿಟ್ಟಿದ್ದೇನೋ ಅಲ್ಲೆಲ್ಲಾ ಉಳಿದವರೆಲ್ಲರೂ ಜೀವಿಸುವದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು. ಇದು ಯೆಹೋವನ ನುಡಿ.
Kannada Bible (KNCL) BSI 2016
ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’