Jeremiah 8:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆರೆಮೀಯನೇ, ಯೆಹೂದದ ಜನರಿಗೆ ಹೀಗೆ ಹೇಳು: ಯೆಹೋವನು ಈ ಮಾತನ್ನು ಹೇಳುತ್ತಾನೆ. “ಒಬ್ಬ ಮನುಷ್ಯನು ಕೆಳಗೆ ಬಿದ್ದರೆ ಪುನಃ ಅವನು ಮೇಲಕ್ಕೆ ಏಳುತ್ತಾನೆ; ಒಬ್ಬ ಮನುಷ್ಯನು ತಪ್ಪುದಾರಿ ಹಿಡಿದರೆ ಅವನು ಹಿಂತಿರುಗಿ ಬರುತ್ತಾನೆಂಬುದು ನಿಮಗೆ ಗೊತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?
Kannada BSI Bible 2016
ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನು ಇಂತೆನ್ನುತ್ತಾನೆ - ಬಿದ್ದವರು ಏಳದಿರುವರೋ? ಬಿಟ್ಟು ಹೋದವನು ತಿರಿಗಿ ಬರುವದಿಲ್ಲವೋ?
Kannada Bible (KNCL) BSI 2016
ನೀನು ಅವರಿಗೆ ಹೀಗೆ ಹೇಳಬೇಕು: “ಸರ್ವೇಶ್ವರ ಇಂತೆನ್ನುತ್ತಾರೆ: ಬಿದ್ದವರು ಮತ್ತೆ ಏಳುತ್ತಾರಲ್ಲವೆ? ಬಿಟ್ಟುಹೋದವನು ತಿರುಗಿಬರುತ್ತಾನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಅವರು ಬಿದ್ದು ಮತ್ತೆ ಏಳರೋ? ಹಿಂದಿರುಗಿದವನು ಮತ್ತೆ ಬರುವುದಿಲ್ಲವೋ?