Jeremiah 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಜನರು ತಪ್ಪುದಾರಿಯನ್ನು ಹಿಡಿದಿದ್ದಾರೆ. ಆದರೆ ಜೆರುಸಲೇಮಿನ ಜನರು ಆ ತಪ್ಪು ದಾರಿಯ ಮೇಲೆ ನಡೆಯುವದನ್ನು ಏಕೆ ಮುಂದುವರಿಸಿದ್ದಾರೆ? ತಮ್ಮ ಸುಳ್ಳುಗಳನ್ನೆ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಬರಲು ಸಿದ್ಧರಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.
Kannada BSI Bible 2016
ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಯೆರೂಸಲೇವಿುನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರಿಗಿ ಬರಲೊಲ್ಲರು.
Kannada Bible (KNCL) BSI 2016
ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ ಹಿಂದಿರುಗದಂತೆ ಏಕೆ ಬಿಟ್ಟು ಹೋಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವುದಕ್ಕೆ ನಿರಾಕರಿಸುತ್ತಾರೆ.