Jeremiah 8:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕಾಶದಲ್ಲಿ ಹಾರಾಡುವ ಘಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಙೇಕಾದ ಕಾಲವನ್ನು ಘಲ್ಲವು. ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.
Kannada BSI Bible 2016
ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯವಿುತ ಕಾಲಗಳನ್ನು ತಿಳಿದುಕೊಂಡಿದೆ, ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ; ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.
Kannada Bible (KNCL) BSI 2016
ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು.