Jeremiah 9:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.
Kannada BSI Bible 2016
ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತವನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದುಹೋಗರು, ದನದ ಸದ್ದು ಕಿವಿಗೆ ಬೀಳದು, ಮೃಗಪಕ್ಷಿಗಳು ತೊಲಗಿಹೋಗಿವೆ.
Kannada Bible (KNCL) BSI 2016
ನಾನು: ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.