Jeremiah 9:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನ ಸಂದೇಶವನ್ನು ವಿವರಿಸಘಲ್ಲವನೊಬ್ಬನಿದ್ದಾನೆಯೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?
Kannada BSI Bible 2016
ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?
Kannada Bible (KNCL) BSI 2016
ನಾನು: “ಈ ನಾಡು ಯಾರೂ ಹಾದುಹೋಗದಷ್ಟು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಷಯವನ್ನು ಗ್ರಹಿಸತಕ್ಕ ಜ್ಞಾನಿ ಯಾರು? ಅದನ್ನು ಸರ್ವೇಶ್ವರನ ಬಾಯಿಂದಲೆ ಕೇಳಿ ತಿಳಿಸಬಲ್ಲವನಾರು?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಗ್ರಹಿಸುವ ಜ್ಞಾನಿಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಯೆಹೋವ ದೇವರ ಬಾಯಿ ಯಾರ ಸಂಗಡ ಮಾತನಾಡಿತು? ದೇಶವು ಯಾವುದಕ್ಕಾಗಿ ನಾಶವಾಗಿ ಹಾದು ಹೋಗುವವನಿಲ್ಲದೆ ಮರುಭೂಮಿಯ ಹಾಗೆ ಹಾಳಾಯಿತು?