Jeremiah 9:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಈ ಪ್ರಶೆಐಗಳಿಗೆ ಉತ್ತರಕೊಟ್ಟನು: “ಏಕೆಂದರೆ ಯೆಹೂದದ ಜನರು ನನ್ನ ಉಪದೇಶವನ್ನು ಅನುಸರಿಸಲಿಲ್ಲ. ನಾನು ಅವರಿಗೆ ಧರ್ಮೋಪದೇಶವನ್ನು ಕೊಟ್ಟರೂ ಅವರು ನನ್ನ ಮಾತನ್ನು ಕೇಳಲು ಒಪ್ಪಲಿಲ್ಲ. ಅವರು ನನ್ನ ಧರ್ಮೋಪದೇಶಗಳನ್ನು ಅನುಸರಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು.
Kannada BSI Bible 2016
ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ ನನ್ನ ಮಾತನ್ನು ಕೇಳದೆ ಆ ಧರ್ಮಮಾರ್ಗದಲ್ಲಿ ನಡೆಯದೆ
Kannada Bible (KNCL) BSI 2016
ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೇಳುವುದೇನೆಂದರೆ, “ನಾನು ಅವರ ಮುಂದೆ ಇಟ್ಟ ನನ್ನ ನಿಯಮವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ,