Jeremiah 9:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.
Kannada BSI Bible 2016
ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಂತ ಹೃದಯದ ಹಟದಂತೆ ನಡೆದು ತಮ್ಮ ಪಿತೃಗಳು ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದ್ದರಿಂದ
Kannada Bible (KNCL) BSI 2016
ನನ್ನ ಮಾತನ್ನು ಕೇಳದೆ, ಧರ್ಮಮಾರ್ಗದಲ್ಲಿ ನಡೆಯದೆ, ಹಟಮಾರಿಗಳಂತೆ ಸ್ವೇಚ್ಛಾನುಸಾರ ನಡೆದುಕೊಂಡರು. ತಮ್ಮ ಪೂರ್ವಜರು ಕಲಿಸಿಕೊಟ್ಟ ಹಾಗೆ ಬಾಳ್‍ದೇವತೆಗಳನ್ನು ಹಿಂಬಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ, ತಮ್ಮ ಪಿತೃಗಳು ಅವರಿಗೆ ಬೋಧಿಸಿದ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.”