Jeremiah 9:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಯೆಹೂದದ ಜನರನ್ನು ಬೇರೆ ಜನಾಂಗಗಳಲ್ಲಿ ಚದರಿಸಿಬಿಡುತ್ತೇನೆ. ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. ನಾನು ಖಡ್ಗಧಾರಿಗಳಾದ ಜನರನ್ನು ಕಳುಹಿಸುತ್ತೇನೆ. ಅವರು ಯೆಹೂದದ ಜನರನ್ನು ನಿರ್ಮೂಲವಾಗುವವರೆಗೆ ಕೊಲ್ಲುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.
Kannada BSI Bible 2016
ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್‌ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರಿಗಾಗಲಿ ಇವರ ಪಿತೃಗಳಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು.
Kannada Bible (KNCL) BSI 2016
ಇವರಿಗಾಗಲಿ ಇವರ ಪೂರ್ವಜರಿಗಾಗಲಿ ಪರಿಚಯವಿಲ್ಲದ ಜನಾಂಗಗಳ ನಡುವೆ ಇವರನ್ನು ಚದರಿಸಿಬಿಡುವೆನು. ಇವರು ಅಳಿದು ಹಾಳಾಗುವ ತನಕ ಇವರ ಹಿಂದೆ ಖಡ್ಗವನ್ನು ಕಳಿಸುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”