Jeremiah 9:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ಹೆಂಗಸರು, ಙೇಗನೆ ಬಂದು ನಮಗಾಗಿ ಗೋಳಾಡಲಿ. ಆಗ ನಮ್ಮ ಕಣ್ಣುಗಳು ಕಣ್ಣೀರಿನಿಂದ ತುಂಬುವವು; ನಮ್ಮ ಕಣ್ಣುಗಳಿಂದ ನೀರಿನ ಪ್ರವಾಹಗಳು ಹರಿಯುವವು’ ಎನ್ನುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆ ಹೊರಡುವಂತೆಯೂ ನಮ್ಮ ರೆಪ್ಪೆಗಳೊಳಗಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳೆತ್ತಲಿ.
Kannada Bible (KNCL) BSI 2016
ಜನರು: “ಅವರು ತ್ವರೆಯಾಗಿ ಬಂದು ನಮಗೋಸ್ಕರ ಗೋಳೆತ್ತಲಿ ನಮ್ಮ ಕಣ್ಣುಗಳಿಂದ ನೀರು ಧಾರಾಕಾರವಾಗಿ ಸುರಿವಂತೆ ಮಾಡಲಿ ಕಣ್ಣಿನ ರೆಪ್ಪೆಗಳಿಂದ ನೀರು ಉಕ್ಕಿ ಹರಿವಂತೆ ಮಾಡಲಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣುಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.