Jeremiah 9:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಙೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಙೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;
Kannada BSI Bible 2016
ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ; ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸಮಾಡಿಸಲಿ;
Kannada Bible (KNCL) BSI 2016
ನಾನು: “ಮಹಿಳೆಯರೇ, ಸರ್ವೇಶ್ವರ ಸ್ವಾಮಿಯ ನುಡಿಯನ್ನು ಕೇಳಿರಿ ಅವರ ಬಾಯಿಂದ ಹೊರಟ ಮಾತಿಗೆ ಕಿವಿ ತೆಗೆಯಿರಿ ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ ಪ್ರತಿಯೊಬ್ಬಳೂ ತನ್ನ ನೆರೆಯವಳಿಗೆ ಶೋಕಗೀತೆಯನ್ನು ಹೇಳಿಕೊಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ. ನಿಮ್ಮ ಪುತ್ರಿಯರಿಗೆ ಗೋಳಾಟವನ್ನೂ, ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.