Jeremiah 9:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಮೃತ್ಯುವು ಬಂದುನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.
Kannada BSI Bible 2016
ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕಂದರೆ ಬೀದಿಗಳಲ್ಲಿ ಮಕ್ಕಳೂ ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿದೆ.
Kannada Bible (KNCL) BSI 2016
ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.