Jeremiah 9:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: ‘ಹೊಲಗಳಲ್ಲಿ ಗೊಬ್ಬರ ಬಿದ್ದಂತೆ ಹೆಣಗಳು ಬೀಳುವವು. ಆ ಶವಗಳು ಹೊಲ ಕೊಯ್ಯುವವನ ಹಿಂದೆ ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.
Kannada BSI Bible 2016
ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಈ ಮಾತನ್ನು ಸಾರು ಎಂದು ನನಗೆ ಅಪ್ಪಣೆಯಾಯಿತು - ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವವು; ಅವು ಹೊಲಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವವು.
Kannada Bible (KNCL) BSI 2016
ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುವು ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವುವು - ಈ ಮಾತುಗಳನ್ನು ಸಾರುವಂತೆ ಸರ್ವೇಶ್ವರನಿಂದ ನನಗೆ ಅಪ್ಪಣೆಯಾಯಿತು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನಗೆ ಹೀಗೆಂದರು: “ ‘ಮನುಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳುವುವು. ಧಾನ್ಯ ಕೊಯ್ಯುವವನು ಉಳಿಸಿದ ಕೈಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವುವು.’ ”