Jeremiah 9:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಘಲಶಾಲಿಗಳು ತಮ್ಮ ಘಲದ ಬಗ್ಗೆ ಘಡಾಯಿ ಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬ ಕೊಚ್ಚಿಕೊಳ್ಳಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.
Kannada BSI Bible 2016
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ: “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.