Jeremiah 9:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.
Kannada BSI Bible 2016
ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.