Jeremiah 9:25 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಕೇವಲ ದೈಹಿಕವಾಗಿ ಸುನ್ನತಿಯನ್ನು ಮಾಡಿಕೊಂಡ ಜನರನ್ನು ನಾನು ಶಿಕ್ಷಿಸುವ ಕಾಲ ಬರಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.
Kannada BSI Bible 2016
ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಐಗುಪ್ತ್ಯರು ಯೆಹೂದ್ಯರು ಎದೋಮ್ಯರು ಅಮ್ಮೋನ್ಯರು ಮೋವಾಬ್ಯರು ಚಂಡಿಕೆಬಿಟ್ಟುಕೊಂಡಿರುವ ಅರಣ್ಯನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ;
Kannada Bible (KNCL) BSI 2016
“ಈಜಿಪ್ಟರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೊವಾಬ್ಯರು, ಮುಂದಲೆ ಕೂದಲನ್ನು ಕತ್ತರಿಸಿಕೊಳ್ಳುವ ಅರಣ್ಯವಾಸಿಗಳು, ಅಂತು ದೇಹದಲ್ಲಿ ಮಾತ್ರ ಸುನ್ನತಿಯುಳ್ಳವರು, ಇವರೆಲ್ಲರನ್ನು ದಂಡಿಸುವ ದಿನಗಳು ಬರುತ್ತವೆ.