Jeremiah 9:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಘಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.
Kannada BSI Bible 2016
ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಳ್ಳಾಡುವದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬೊಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ; ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ಸರ್ವೇಶ್ವರ: “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.