Jeremiah 9:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮ್ಮ ನೆರೆಮನೆಯವರ ಬಗ್ಗೆ ಎಚ್ಚರವಹಿಸಿರಿ; ನಿಮ್ಮ ಸ್ವಂತ ಸಹೋದರನನ್ನೂ ನಂಬಬೇಡಿ. ಏಕೆಂದರೆ ಪ್ರತಿಯೊಬ್ಬ ಸಹೋದರನೂ ಮೋಸಗಾರನಾಗಿದ್ದಾನೆ. ಪ್ರತಿಯೊಬ್ಬ ನೆರೆಯವನೂ ನಿಮ್ಮ ಮರೆಯಲ್ಲಿ ನಿಮ್ಮನ್ನು ನಿಂದಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.
Kannada BSI Bible 2016
ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ, ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ; ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.
Kannada Bible (KNCL) BSI 2016
ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ. ಯಾವ ಸಹೋದರನಲ್ಲಾದರೂ ನಂಬಿಕೆ ಇಡಬೇಡಿರಿ. ಏಕೆಂದರೆ ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸ ಮಾಡುವರು; ನೆರೆಯವರೆಲ್ಲರೂ ಚಾಡಿ ಹೇಳುತ್ತಾ ತಿರುಗಾಡುವರು.