Jeremiah 9:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.
Kannada BSI Bible 2016
ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ; ತಮಗೆ ಆಯಾಸವಾಗುವ ಮಟ್ಟಿಗೂ ಕೆಡುಕನ್ನು ಮಾಡುತ್ತಿದ್ದಾರೆ.
Kannada Bible (KNCL) BSI 2016
ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.