Jeremiah 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಜನರು ಲೋಹವನ್ನು ಪುಟಕ್ಕಿಟ್ಟು ಪರೀಕ್ಷಿಸುವಂತೆ ನಾನು ಯೆಹೂದದ ಜನರನ್ನು ಪರೀಕ್ಷಿಸುತ್ತೇನೆ. ನನಗೆ ಬೇರೆ ಮಾರ್ಗವೇ ಇಲ್ಲ. ನನ್ನ ಜನರು ಪಾಪವನ್ನು ಮಾಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.
Kannada BSI Bible 2016
ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.
Kannada Bible (KNCL) BSI 2016
ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ: “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ?