Jeremiah 9:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. ಅವರ ಬಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.
Kannada BSI Bible 2016
ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದು ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.
Kannada Bible (KNCL) BSI 2016
ಅವರ ನಾಲಿಗೆ ಕೊಲ್ಲುವ ಬಾಣ, ಅದು ಆಡುವುದು ಸುಳ್ಳನ್ನೇ ಬಾಯಲ್ಲಿ ಶುಭವೆಂದು ಹೇಳಿದರೂ ಹೃದಯದಲ್ಲಿ ಒಡ್ಡಿದ್ದಾರೆ ಹೊಂಚನ್ನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ನಾಲಿಗೆ ಎಸೆದ ಬಾಣದಂತಿದೆ. ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ, ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾರೆ.