Job 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಸೈತಾನನಿಗೆ, “ಸರಿ, ಯೋಬನ ಆಸ್ತಿಗೆಲ್ಲಾ ನೀನು ಏನು ಬೇಕಾದರೂ ಮಾಡು. ಆದರೆ ಅವನ ದೇಹಕ್ಕೆ ಮಾತ್ರ ನೋವನ್ನು ಮಾಡಬೇಡ” ಎಂದು ಹೇಳಿದನು. ಬಳಿಕ ಸೈತಾನನು ಯೆಹೋವನ ಬಳಿಯಿಂದ ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಸೈತಾನನಿಗೆ, “ನೋಡು, ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ. ಆದರೆ ಅವನ ಮೈಮೇಲೆ ಮಾತ್ರ ಕೈಹಾಕಬೇಡ” ಎಂದು ಅಪ್ಪಣೆಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.
Kannada BSI Bible 2016
ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಸೈತಾನನಿಗೆ - ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ, ನೋಡು. ಆದರೆ ಅವನ ಮೈ ಮೇಲೆ ಮಾತ್ರ ಕೈಹಾಕಬೇಡ ಎಂದು ಅಪ್ಪಣೆ ಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.
Kannada Bible (KNCL) BSI 2016
ಸರ್ವೇಶ್ವರ ಸೈತಾನನಿಗೆ, “ನೋಡು, ಆತನ ಆಸ್ತಿಪಾಸ್ತಿಯೆಲ್ಲ ನಿನ್ನ ಕೈವಶಕ್ಕೆ ಬಿಟ್ಟಿದ್ದೇನೆ. ಆತನ ಮೈಮೇಲೆ ಮಾತ್ರ ಕೈಹಾಕಬೇಡ,” ಎಂದು ಅಪ್ಪಣೆಕೊಟ್ಟರು. ಕೂಡಲೆ ಸೈತಾನನು ಸರ್ವೇಶ್ವರರ ಸನ್ನಿಧಾನದಿಂದ ಹೊರಟುಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಸೈತಾನನಿಗೆ, “ಅವನಲ್ಲಿರುವ ಎಲ್ಲವೂ ನಿನ್ನ ಅಧಿಕಾರದಲ್ಲಿ ಇವೆ. ಆದರೆ ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ,” ಎಂದರು. ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋದನು.