Job 1:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ದಿನ, ಯೋಬನ ಗಂಡುಹೆಣ್ಣುಮಕ್ಕಳು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ಊಟಮಾಡುತ್ತಾ ದ್ರಾಕ್ಷಾರಸ ಕುಡಿಯುತ್ತಾ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ಬಳಿಕ ಒಂದು ದಿನ ಯೋಬನ ಗಂಡು ಹೆಣ್ಣು ಮಕ್ಕಳು ಹಿರಿಯವನ ಮನೆಯಲ್ಲಿ ಔತಣದಲ್ಲಿ ಊಟಮಾಡಿ ಕುಡಿಯುತ್ತಿರುವಾಗ,
Kannada BSI Bible 2016
ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದಾನೊಂದು ದಿವಸದಲ್ಲಿ ಯೋಬನ ಗಂಡು ಹೆಣ್ಣುಮಕ್ಕಳು ಹಿರಿಯವನ ಮನೆಯಲ್ಲಿ ಉಂಡು ಕುಡಿಯುತ್ತಿರುವಾಗ
Kannada Bible (KNCL) BSI 2016
ಇದಾದ ಬಳಿಕ ಯೋಬನ ಪುತ್ರಪುತ್ರಿಯರು ತಮ್ಮ ಹಿರಿಯಣ್ಣನ ಮನೆಯಲ್ಲಿ ಔತಣಮಾಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ದಿನ ಯೋಬನ ಪುತ್ರಪುತ್ರಿಯರು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತಾ ಔತಣಮಾಡುತ್ತಿದ್ದರು.