Job 1:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಆಕಾಶದಿಂದ ಸಿಡಿಲೊಡೆದು ನಿನ್ನ ಕುರಿಗಳನ್ನೂ ಸೇವಕರುಗಳನ್ನೂ ಸಂಪೂರ್ಣವಾಗಿ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮಾತನಾಡುತ್ತಿರುವಾಗಲೇ ಮತ್ತೊಬ್ಬನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ, ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
Kannada BSI Bible 2016
ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮಾತಾಡುತ್ತಿರುವಾಗಲೇ ಮತ್ತೊಬ್ಬನು ಬಂದು ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.
Kannada Bible (KNCL) BSI 2016
ಅವನು ಮಾತಾಡಿ ಮುಗಿಸುವಷ್ಟರಲ್ಲೇ ಮತ್ತೊಬ್ಬನು ಬಂದು, “ದೇವರು ಆಕಾಶದಿಂದ ಬೆಂಕಿ ಸುರಿಸಿದರು. ಅದು ಕುರಿಗಳನ್ನೂ, ಕೂಲಿ ಆಳುಗಳನ್ನೂ ಸುಟ್ಟು ಭಸ್ಮಮಾಡಿತು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬ ದೂತನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಸೇವಕರನ್ನೂ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.