Job 1:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು; ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.
Kannada BSI Bible 2016
ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು.
Kannada Bible (KNCL) BSI 2016
ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”