Job 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನ ಗಂಡುಮಕ್ಕಳು ಯಾವಾಗಲೂ ಸರದಿಯ ಪ್ರಕಾರ ಔತಣಕೂಟಗಳನ್ನು ತಮ್ಮ ಮನೆಗಳಲ್ಲಿ ಏರ್ಪಡಿಸುತ್ತಿದ್ದರು; ಆ ಔತಣಕೂಟಗಳಿಗೆ ತಮ್ಮ ಸಹೋದರಿಯರನ್ನು ಸಹ ಆಹ್ವಾನಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡೆಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು.
Kannada BSI Bible 2016
ಅವನ ಕುಮಾರರು ಹೋಗಿ ತಮ್ಮ ತಮ್ಮ ಮನೆಗಳಲ್ಲಿ ಅವನವನ ದಿವಸದಲ್ಲಿ ಔತಣವನ್ನು ಮಾಡಿಸಿ ತಮ್ಮ ಸಂಗಡ ತಿನ್ನುವದಕ್ಕೂ ಕುಡಿಯುವ ದಕ್ಕೂ ತಮ್ಮ ಮೂವರು ಸಹೋದರಿಯರನ್ನು ಕರೆ ಕಳುಹಿಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಕುಮಾರರು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡಿಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು.
Kannada Bible (KNCL) BSI 2016
ಆತನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ಏರ್ಪಡಿಸುತ್ತಿದ್ದರು. ತಮ್ಮ ಮೂವರು ತಂಗಿಯರನ್ನೂ ಆ ಭೋಜನಕ್ಕೆ ಆಹ್ವಾನಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಪುತ್ರರು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ಏರ್ಪಡಿಸಿ, ತಮ್ಮ ಸಂಗಡ ಊಟಮಾಡುವದಕ್ಕೆ ತಮ್ಮ ಮೂವರು ಸಹೋದರಿಯರನ್ನು ಆಹ್ವಾನಿಸುತ್ತಿದ್ದರು.