Job 1:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.
Kannada BSI Bible 2016
ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.
Kannada Bible (KNCL) BSI 2016
ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.